- 1 -
ಮದ, ಮತ್ಸರ, ಕಾಮ, ಕ್ರೋಧ,
ಲೋಭ, ವ್ಯಾಮೋಹ ಮತ್ತು ಛಲ
ಇವುಗಳನೆಲ್ಲಾ ತೊರೆಯಬೇಕು
ಎನ್ನುವುದು ಶಿಷ್ಟರ ಸಲಹೆ.
ಆದರೆ, ಇವೆಲ್ಲವನ್ನು ತೊರೆದ ಮೇಲೆ
ಮನುಷ್ಯನಾಗಿ ಉಳಿಯುವ
ಸ್ಪಷ್ಟ ಸಾಧ್ಯತೆ ಅಥವಾ ಅರ್ಹತೆ ಇದೆಯೆ?
- 2 -
ಮದುವೆಯಾದ ಮೇಲೆ ಬೇರೆಯವರನ್ನು
ಬಯಸಬಾರದೆನ್ನುವುದು ಸಾಪೇಕ್ಷವಾದರೂ.
ಇಲ್ಲವೆಂದು ಯಾರಾದರೂ ದಿಟ್ಟ ಉತ್ತರ ಕೊಟ್ಟರೆ
ಸೋಗುಹಾಕುತ್ತಿದ್ದಾರೆಂಬುದು ಶೇಕಡಾ ನೂರರಷ್ಟು
ನಿಸ್ಸಂಶಯ ಅಲ್ಲವೆ?
- 3 -
ಪರಿಮಳ ಭರಿತ ಗುಲಾಬಿಯೊಂದು
ಚಿರಯೌವನದಲ್ಲಿ ತೇಲಾಡುತ್ತಾ
ಸಂದಿಗ್ಧ ಸನ್ನಿವೇಶದಲ್ಲಿ ಸಿಲುಕಿದೆ.
ಮೊದಲು ಅವಳ ಮುಡಿಗೆ ಮುತ್ತಿಡಲೊ,
ಅಥವಾ ಅವನ ಹೃದಯವನ್ನಪ್ಪಿಕೊಳ್ಳಲೊ
ಎಂಬುದರ ತೀವ್ರ ಗೊಂದಲದಲ್ಲಿ.
ಇದು ಸಮಯಾಭಾವದ ಸೃಷ್ಟಿ ಇರಬಹುದೆ?
- 4 -
ತುಂಟ ಬೇಟೆಗಾರನ ಬಂದೂಕಿನ ಗುಂಡಿಗೆ
ಉರುಳಿ ಬಿದ್ದಿದೆ ಒಂದು ಸಾಧು ಜಿಂಕೆ
ಕಾನೂನಿನ ಕಣ್ಣಿಗೆ ಸಿಕ್ಕಿಬಿದ್ದ ನಂತರ
ಅವನು ಆತ್ಮಸಂರಕ್ಷಣೆಗೆ ಎಂದು ಬೊಬ್ಬೆಯಿಟ್ಟದ್ದು
ದೊಡ್ಡ ವಿಪರ್ಯಾಸ ಅಲ್ಲವೆ?
4 comments:
tumba chennagive saalugalu... modala saalu bahala istavaayitu
thanks madam!
ಸೂಪರ್.
ಎಲ್ಲ ಸಾಲುಗಳು ತುಂಬಾ ಅರ್ಥಪುರ್ಣವಾಗಿವೆ.
===
ಬಿಂಬ'ದ ಎಲ್ಲ ಭಾಗಗಳು ತುಂಬಾ ಚನ್ನಾಗಿವೆ.
ಪ್ರೋತ್ಸಾಹದ ಪ್ರತಿಕ್ರೆಯೆಗೆ
ಧನ್ಯವಾದಗಳು ಶಿವಪ್ರಕಾಶ್ ಅವರೆ.
-ಚಂದಿನ
Post a Comment